ಪ್ರತಿ ವರ್ಷ ಐದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗುತ್ತಾರೆ. ಆದರೆ ಇದಕ್ಕೆ ಪ್ರತಿಯಾಗಿ ಒಂದು ಲಕ್ಷ ವೈದ್ಯಕೀಯ ಸೀಟುಗಳು ಮಾತ್ರ ಲಭ್ಯವಿದೆ. ಇದರಿಂದ ಬೇಡಿಕೆ ಮತ್ತು ಪೂರೈಕೆ ನಡುವಿನ ಅಂತರ ಹೆಚ್ಚಾಗುತ್ತಿದೆ ಎಂದು ಹೇಳಿದರು.ಅಸಮಾನತೆಯನ್ನು ತಕ್ಷಣ ನಿವಾರಿಸಬೇಕು. ಭಾರತೀಯ ವೈದ್ಯರಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆ. ಜಾಗತಿಕವಾಗಿ ಭಾರತೀಯ ವೈದ್ಯಕೀಯ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ಇದೆ. ಬೇಡಿಕೆ ಮತ್ತು ಲಭ್ಯತೆಯ ಅಂತರ ಕಡಿಮೆ ಮಾಡಲು ಎನ್‌ಎಂಸಿ ಮಧ್ಯಪ್ರವೇಶಿಸಬೇಕು ಎಂದರು.ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಹಲವು ಯೋಜನೆಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಶೀಘ್ರದಲ್ಲೇ, ವೈದ್ಯಕೀಯ ಕಾಲೇಜುಗಳಿಲ್ಲದ ಜಿಲ್ಲೆಗಳಲ್ಲಿ ಸಂಪೂರ್ಣ ಸುಸಜ್ಜಿತ ಸಂಸ್ಥೆಗಳನ್ನು ಆರಂಭಿಸಲಾಗುತ್ತದೆ. ವೇದಿಕೆಯ ಮೇಲೆ ಹಾಜರಿದ್ದ ಎನ್‌ಎಂಸಿ ಅಧ್ಯಕ್ಷರಾದ” ಡಾ. ಬಿ.ಎನ್. ಗಂಗಾಧರ “ಅವರಿಗೆ ಈ ಕುರಿತು ಸಚಿವರು ಮನವರಿಕೆ ಮಾಡಿಕೊಟ್ಟರು. ಈ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ಹೆಚ್ಚುವರಿಯಾಗಿ 800 ಪದವಿಪೂರ್ವ ಮತ್ತು 600 ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ ಅನುಮೋದನೆ ಕೋರಿ ಎನ್‌ಎಂಸಿಗೆ ಈಗಾಗಲೇ ಔಪಚಾರಿಕ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

