ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿರುವ ಹೈದ್ರಾ ದರ್ಗಾದಲ್ಲಿ ಆಯಿಷಾ ಸಂಬಂಧಿಕರ ಮಗುವಿನ ಕೇಶ ಮುಂಡನ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಬೀದಿನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ರಸ್ತೆಯಲ್ಲಿ ಉರುಳಿ ಬಿದ್ದಿದೆ. ಅಫಜಲಪುರ ತಾಲೂಕಿನ ಗೊಬ್ಬೂರ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಘಟನೆ ನಡೆದಿದ್ದು, ಮೃತರನ್ನು ಕಲಬುರಗಿಯ ಮಿಲ್ಲತ್ ನಗರದ ನಿವಾಸಿಗಳಾದ ಆಯಿಷಾ ಅಜ್ಮೇರಾ ಹಾಗೂ ಜೈನಬ್ ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ದೇವಲ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

