ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ಮಂಗಳವಾರ ನಡೆದ ಉಗ್ರರ ಧಾಳಿಯು ಅತ್ಯಂತ ಖಂಡನೆಯವಾದುದ್ದು. ಉಗ್ರವಾದಿಗಳ ಹೇಯ ಕೃತಕ್ಕೆ ತಕ್ಕ ಉತ್ತರ ನೀಡಲೇಬೇಕೆಂದು ಸ್ಲಂ ಬೋರ್ಡ್ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ್ ಅಬ್ಬಯ್ಯ ಆಗ್ರಹಿಸಿದ್ದಾರೆ. ದಾಳಿಯಲ್ಲಿ ಕರ್ನಾಟಕದ ಮೂವರು ಸೇರಿದಂತೆ 30ಕ್ಕೂ ಹೆಚ್ಚು ಜನರು ಬಲೆಯಾಗಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಯಾವುದೇ ಉಗ್ರಸಂಘಟನೆಯಿಂದ ಈ ಘಟನೆ ನಡೆದಿರಲಿ. ಅಂತವರ ವಿರುದ್ಧ ಕೇಂದ್ರ ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳಬೇಕಿದೆ. ಇದಕ್ಕೆ ಎಲ್ಲರೂ ಪಕ್ಷತೀತವಾಗಿ ಕೈಜೋಡಿಸಬೇಕೆಂದು ಹೇಳಿದ್ದಾರೆ. ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆಯುತ್ತಿರುವ ಕಾರ್ಯಕ್ರಮವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

