ಪಹಲ್ಗಾಮ್ ನಲ್ಲಿ ಹಿಂದುಗಳ ಗುರಾಯಿಸಿ ಭಯೋತ್ಪಾದಕರು ದಾಳಿ ಮಾಡಿರುವ ಇಸ್ಲಾಮಿಕ್ ಭಯೋತ್ಪಾದನೆಯಾಗಿದ್ದು, ಕೇಂದ್ರ ಸರ್ಕಾರ ಪಾಕಿಸ್ತಾನದ ಮೇಲೆ ಯುದ್ಧಸಾರಬೇಕು ಎಂದು ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದಕ ಧಾಳಿಯಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಮೃತಪಟ್ಟಿಲ್ಲ, ಸ್ಥಳೀಯ ಮುಸ್ಲಿಮರ ಸಹಕಾರವಿಲ್ಲದೆ ಈ ದಾಳಿ ನಡೆದಿರಲು ಸಾಧ್ಯವಿಲ್ಲ. ಜಮ್ಮು ಕಾಶ್ಮೀರದಲ್ಲಿರುವ ಮುಸ್ಲಿಮರು ಭಯೋತ್ಪಾದಕರ ಬಚಾವ ಮಾಡುವದನ್ನು ಬಿಡಬೇಕು, ಭಯೋತ್ಪಾದಕರ ವಿರುದ್ಧ ಸಿಡಿದೆಳಬೇಕು. ಇಲ್ಲವಾದರೆ ಇಡೀ ದೇಶ ನಿಮ್ಮ ವಿರುದ್ಧ ನಿಲ್ಲಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ವಿಷಯದಲ್ಲಿ ರಾಜಕಾರಣ ಮಾಡಬಾರದು. ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ ಲಾಡ್ ಅವರನ್ನು ಕಳಿಸಿದೆ. ಕೇಂದ್ರ ಸಚಿವ ಅಮಿತ್ ಶಾಹ ಸ್ಥಳಕ್ಕೆ ಭೇಟಿ ನೀಡಿದ್ದು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

