Breaking News

ಟಿಕೆಟ್‌ ವಿಚಾರದಲ್ಲಿ ವಾಗ್ವಾದ, ನಿರ್ವಾಹಕನಿಂದ ಮಹಿಳೆ ಮೇಲೆ ಹಲ್ಲೆ!!

ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಗುರುವಾರ ರಾತ್ರಿ ಮಗುವೊಂದಕ್ಕೆ ಅರ್ಧ ಟಿಕೆಟ್‌ ತೆಗೆಯುವ ವಿಚಾರವಾಗಿ ನಿರ್ವಾಹಕ ಟಿಕೆಟ್‌ ಯಂತ್ರದಲ್ಲಿ ಮಹಿಳೆಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಾಗ್ವಾದ ನಡೆದು ಬಳಿಕ ಬಿ.ಸಿ.ರೋಡಿನಲ್ಲಿ ಪೊಲೀಸರು ಮಾತುಕತೆ ನಡೆಸಿ ಬಸ್ಸನ್ನು ಕಳುಹಿಸಿಕೊಟ್ಟಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಬಂಟ್ವಾಳ ನಗರ ಪೊಲೀಸರಿಗೆ ಮಾಹಿತಿ ನೀಡಿದರು. ಬಂಟ್ವಾಳ ನಗರ ಠಾಣಾ ಪಿಎಸ್‌ಐ ರಾಮಕೃಷ್ಣ ಹಾಗೂ ಸಿಬಂದಿ ಬಸ್ಸನ್ನು ಬಿ.ಸಿ.ರೋಡು ನಿಲ್ದಾಣದಲ್ಲಿ ನಿಲ್ಲಿಸಿ ವಿಚಾರಣೆ ನಡೆಸಿದರು.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *