Breaking News

ಚಿನ್ನಾಭರಣ ವಂಚನೆ ಪ್ರಕರಣ : ಐಶ್ವರ್ಯ ಗೌಡಗೆ 14 ದಿನ ‘ED’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ!!

ಸಹೋದರಿ ಎಂದು ಹೇಳಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯ ಗೌಡಳನ್ನು 14 ದಿನ ಜಾರಿ ನಿರ್ದೇಶನಾಲಯ ಕಸ್ಟಡಿಗೆ ನೀಡಿ ಇದೀಗ ಕೋರ್ಟ್ ಆದೇಶ ಹೊರಡಿಸಿದೆ.ಪ್ರಕರಣದ ಪ್ರಮುಖ ಆರೋಪಿ ಐಶ್ವರ್ಯ ಗೌಡ ಅವರ ಆರ್.ಎಂ.ಸಿ‌. ಯಾರ್ಡ್​ನಲ್ಲಿರುವ ನಿವಾಸದ ಮೇಲೆಯೂ ದಾಳಿ ನಡೆಸಿ, ನಿನ್ನೆ ಸಂಜೆವರೆಗೂ ಪರಿಶೀಲಿಸಿದರು. ಬಳಿಕ ಐಶ್ವರ್ಯಳನ್ನು ವಶಕ್ಕೆ ಪಡೆದು ಶಾಂತಿನಗರ ಇ.ಡಿ. ಕಚೇರಿಗೆ ಅಧಿಕಾರಿಗಳು ಕರೆತಂದು ಜಡ್ಜ್ ಮುಂದೆ ಹಾಜರುಪಡಿಸಿದ್ದರು ಇದೀಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಐಶ್ವರ್ಯ ಗೌಡಳನ್ನು 14 ದಿನ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. 9.82 ಕೋಟಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೂ ತಪಾಸಣೆ ನಡೆಸಿದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *