ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಪ್ರವಾಸಿ ತಾಣಕ್ಕೆ ಚಾರಣಕ್ಕಾಗಿ ತೆರಳಿದ್ದ ಕಾಲೇಜು ಯುವತಿಯರು ಸಮುದ್ರದ ಪಕ್ಕದಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ತಮಿಳನಾಡಿನ ತಿರುಚಿಯ ವೈದ್ಯಕೀಯ ಮಹಾವಿದ್ಯಾಲಯದ ಕೊನೆಯ ವರ್ಷದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವರ್ಷದ ಪರೀಕ್ಷೆ ಮುಗಿಸಿ ಗೋಕರ್ಣದ ಜಟಾಯು ತೀರ್ಥಕ್ಕೆ ಪ್ರವಾಸ ಬಂದಿದ್ದರು.ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದ ಕಾರಣ ಸಿಂಧುಜಾ ಮತ್ತು ಕನ್ನಿ ಮೊಳಿ ಎನ್ನುವ ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸರು ಮೃತ ವಿದ್ಯಾರ್ಥಿಗಳ ಪೋಷಕರಿಗೆ ವಿಷಯ ಮುಟ್ಟಿಸಿದ್ದು, ತಮಿಳುನಾಡಿಗೆ ವಿದ್ಯಾರ್ಥಿನಿಯರ ಮೃತದೇಹವನ್ನು ರವಾನಿಸುವ ವ್ಯವಸ್ಥೆ ಮಾಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

