ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ 25 ವರ್ಷದ ಶಾಂತಾ ಎಂಬ ಬಾಣಂತಿ, ಹೆರಿಗೆಯ ಮೂರನೇ ದಿನದಂದು ಹೊಸಪೇಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಮೃತಳ ತಾಯಿಯೇ ಆರೋಪಿಸಿದ್ದಾರೆ.ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಗುಣಮಟ್ಟ ಮತ್ತು ಸಿಬ್ಬಂದಿಯ ಜವಾಬ್ದಾರಿಯ ಕೊರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಶಾಂತಾ ಅವರ ಕುಟುಂಬದ ಆಕ್ರಂದನವು ಸ್ಥಳೀಯರಲ್ಲಿ ಸಹಾನುಭೂತಿಯನ್ನು ಹುಟ್ಟುಹಾಕಿದ್ದು, ಆರೋಗ್ಯ ಇಲಾಖೆಯು ಈ ಪ್ರಕರಣದಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

