ಸಿಐಡಿ ತನಿಖೆ ವೇಳೆ ನಾನು ತಪ್ಪು ಮಾಡಿಲ್ಲ. ನನಗೆ ಸಾಲದ ವಿಚಾರ ಗೊತ್ತಿಲ್ಲ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ಅವರು, ಇದೀಗ ದಿಢೀರ್ ಆಗಿ ಬ್ಯಾಂಕ್‌ಗೆ ಸ್ಪಲ್ಪ ಪ್ರಮಾಣದ ಸಾಲ ಮರಳಿಸಿರುವುದು ಕುತೂಹಲ ಮೂಡಿಸಿದೆ. ಈ ಸಾಲ ಪಾವತಿ ಹಿನ್ನೆಲೆಯಲ್ಲಿ ಮಾಜಿ ಸಚಿವರ ನಡೆ ಕುರಿತು ವಿಶ್ಲೇಷಣೆ ನಡೆದಿದೆ. ವಂಚನೆ ಕೃತ್ಯದಲ್ಲಿ ತಾವು ದೋಷ ಮುಕ್ತರಾಗುವ ವಿಶ್ವಾಸದಲ್ಲಿದ್ದ ಅವರಿಗೆ ಸಿಐಡಿ ಅಧಿಕಾರಿಗಳು ಆರೋಪಪಟ್ಟಿ ಸಲ್ಲಿಕೆಗೆ ಮುಂದಾಗಿದ್ದು ಮುಂದಿನ ಕಾನೂನು ಕ್ರಮದ ಭೀತಿ ಹುಟ್ಟಿಸಿದೆ. ಅದರಿಂದ ತಪ್ಪಿಸಿಕೊಳ್ಳುವ ದೂರದೃಷ್ಟಿ ಇಟ್ಟುಕೊಂಡು ಮಾಜಿ ಸಚಿವರು ಹಣ ಪಾವತಿಸಿರಬಹುದು ಎಂದು ಮೂಲಗಳು ಹೇಳಿವೆ.ನ್ಯಾಯಾಲಯಕ್ಕೆ ಸಿಐಡಿ ಆರೋಪಪಟ್ಟಿ ಸಲ್ಲಿಕೆ ಬೆನ್ನಲ್ಲೇ ದಿಢೀರ್ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಅವರು ಬ್ಯಾಂಕಿಗೆ 120 ಕೋಟಿ ರು.ಸಾಲ ಮರುಪಾವತಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಚಾಮರಾಜಪೇಟೆಯಲ್ಲಿರುವ ರಾಜ್ಯ ಅಪೆಕ್ಸ್ ಬ್ಯಾಂಕ್‌ಗೆ ಮಾಜಿ ಸಚಿವ ಹಾಗೂ ಬೆಳಗಾವಿ ಜಿಲ್ಲೆ ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಾಲ ಕಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

