ಫಾರ್ಮ್ಹೌಸ್ನಲ್ಲಿ ಮಗಳ ಎದುರೇ ತಾಯಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ಸ್ವರೂಪ್ ನಗರದಲ್ಲಿ ನಡೆದಿದೆ.ಘಟನೆ ಸಂಬಂಧ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದು. ದೂರಿನಲ್ಲಿ ಕಾದಿಪುರದ ತೋಟದ ಮನೆಯ ವರಾಂಡಾದಲ್ಲಿ ತಾನು ಮತ್ತು ತನ್ನ 11 ವರ್ಷದ ಮಗಳು ಮಲಗಿದ್ದಾಗ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ. ಅದೇ ಪ್ರದೇಶದಲ್ಲಿ ವಾಸಿಸುತಿದ್ದ ಆರೋಪಿ ಧರ್ಮಿಂದರ್, ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಮಲಗಿದ್ದ ನಮ್ಮ ಕೈ ಕಾಲುಗಳನ್ನು ಕಟ್ಟಿ ಹಾಕಿ ಅತ್ಯಾಚಾರ ಎಸಗಿದ್ದಾನೆ.ಘಟನೆ ಬಗ್ಗೆ ಯಾರಿಗಾದರೂ ತಿಳಿಸಿದರೆ ಮಗಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ನಂತರ ಫಾರ್ಮ್ಹೌಸ್ನ ಗೋಡೆ ಹಾರಿ ಪರಾರಿಯಾಗಿದ್ದಾನೆ. ಏಪ್ರೀಲ್ 24ರಂದು ಮಹಿಳೆಯ ಪತಿ ಮನೆಗೆ ಬಂದಾಗ ಘಟನೆ ಬಗ್ಗೆ ತಿಳಿದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇನ್ನು ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಿದ್ದು. ಆರೋಪಿಯ ವಿರುದ್ ಅತ್ಯಾಚಾರ ಮತ್ತು ಅತಿಕ್ರಮಣ ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

