Breaking News

ಬೆಂಗಳೂರು: ಪ್ರವಾಸಕ್ಕೆ ಸ್ನೇಹಿತರನ್ನು ಕರೆತಂದು ಕಳ್ಳತನ!!

ಶಿವನಾಗಪ್ಪ ಹಾಗೂ ಸುದರ್ಶನ್‌ ಅವರನ್ನು ಪ್ರವಾಸದ ನೆಪದಲ್ಲಿ ಬೆಂಗಳೂರಿಗೆ ಕರೆತಂದಿದ್ದ ಶಿವಕುಮಾರ್‌ ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡಿದ್ದಾರೆ.ಶಿವಕುಮಾರ್ ವಿರುದ್ಧ ರಾಜ್ಯದ ವಿವಿಧ ಪೊಲೀಸ್‌ ಠಾಣೆಯಲ್ಲಿ 16 ಕಳ್ಳತನ ಪ್ರಕರಣಗಳು ದಾಖಲಾಗಿವೆ.ಕದ್ದ ಚಿನ್ನಾಭರಣವನ್ನು ಸ್ನೇಹಿತರ ಮೂಲಕ ಗಂಗಾವತಿ ಹಾಗೂ ಹಗರಿಬೊಮ್ಮನಹಳ್ಳಿಯ ಚಿನ್ನದ ಅಂಗಡಿಯಲ್ಲಿ ಅಡಮಾನ ಇಟ್ಟಿದ್ದರು. ಮೂವರು ಗೋವಾಕ್ಕೆ ಹೋಗಿ ಕಳ್ಳತನ ಮಾಡಿದ್ದ ₹6 ಲಕ್ಷ ಹಣ ಉಪಯೋಗಿಸಿಕೊಂಡು ಮೋಜು-ಮಸ್ತಿ ಮಾಡಿದ್ದರು.ಹಗರಿಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯ ದುರ್ಗಮ್ಮ ದೇವಸ್ಥಾನದ ಬಳಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದರು. ಅವರ ಹೇಳಿಕೆ ಆಧರಿಸಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಯಿತು’. ಬಳ್ಳಾರಿಯ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ನಿವಾಸಿಗಳಾದ ಶಿವಕುಮಾರ್‌, ಶಿವನಾಗಪ್ಪ, ಸುದರ್ಶನ್ ಬಂಧಿತರು.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *