Breaking News

ಬಸ್ ಡಿಕ್ಕಿ:ಸ್ಥಳದಲ್ಲೇ ಬೈಕ್ ಸಾವರ ಸಾವು, ಘಟನೆ ಖಂಡಿಸಿ ಪ್ರತಿಭಟನೆ.!!

ಹುಬ್ಬಳ್ಳಿ: ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿ ಇರುವ ರಿಂಗ್ ರೋಡ್ ನಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದ ರವಿ ಬಾಳಿಕಾಯಿ (30) ಎಂಬಾತ ಮೃತ ಪಟ್ಟ ವ್ಯಕ್ತಿ
ಹುಬ್ಬಳ್ಳಿಯಿಂದ ನವಲಗುಂದ ಕಡೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮುಖ ಹಚ್ಚಿ ಬಿದ್ದಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲೆ ರಕ್ತಸ್ರಾವ ಆಗಿ ಸಾವನಪ್ಪಿದ್ದಾನೆ.ಇನ್ನೂ ಈ ಘಟನೆಗೆ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ ಎನ್ನಲಾಗಿದೆ.ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ಇನ್ನೂ ಘಟನೆ ಖಂಡಿಸಿ ಗ್ರಾಮಸ್ಥರು ಹಾಗೂ ಇತರರು ಕೆಎಸ್ ಆರ್ ಟಿಸಿ ಸಂಸ್ಥೆ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಬಸ್ ಚಾಲಕರು ಇತ್ತಿಚಿನ ದಿನಗಳಲ್ಲಿ ವೇಗದಿಂದ ಬಸ್ ಓಡಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ರು.ಇನ್ನೂ ಸ್ಥಳದಲ್ಲಿದ್ದ ಪೋಲಿಸರು ಹೋರಾಟಗಾರರಿಗೆ ತಿಳಿ ಹೇಳಿ ಕಳುಹಿಸಿದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *