Breaking News

ಆನೇಕಲ್: ಕ್ಷುಲಕ ಕಾರಣಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ!!

ಸುರೇಶ್‌ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ. ಶುಕ್ರವಾರ ರಾತ್ರಿ ಬಾರ್‌ನಲ್ಲಿ ಮದ್ಯ ಸೇವಿಸುತ್ತಿದ್ದಾಗ ಕಾಂತರಾಜು ಎಂಬುವವರೊಂದಿಗೆ ಕ್ಷುಲಕ ಕಾರಣಕ್ಕೆ ಗಲಾಟೆಯಾಗಿದೆ. ಜೋರು ಧ್ವನಿಯಲ್ಲಿ ಮಾತನಾಡುತ್ತಿದ್ದ ಕಾಂತರಾಜು ಮತ್ತು ಸ್ನೇಹಿತರಿಗೆ ಸುರೇಶ್‌ ನಿಧಾನವಾಗಿ ಮಾತನಾಡುವಂತೆ ತಿಳಿಸಿದ್ದಾರೆ. ಇದೇ ವಿಷಯಕ್ಕೆ ಜಗಳ ಪ್ರಾರಂಭವಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ನಂತರ ಮನೆಗೆ ತೆರಳಿದ ಸುರೇಶ್‌ ಅವರನ್ನು ಹಿಂಬಾಲಿಸಿ ಕಾಂತರಾಜು ಮತ್ತು ಸ್ನೇಹಿತರು, ಸುರೇಶ್‌ ಅವರ ಪತ್ನಿ ಬಾಗಿಲು ತೆರೆಯುತ್ತಿದ್ದಂತೆ ಏಕಾಏಕಿ ನುಗ್ಗಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಎಎಸ್ಪಿ ನಾಗೇಶ್‌ ಕುಮಾರ್, ಡಿವೈಎಸ್ಪಿ ಮೋಹನ್‌ ಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಪತ್ತೆಗೆ ಪೊಲೀಸರು ತಂಡ ರಚಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *