ಭಟ್ಟರಹಳ್ಳಿ ಜಂಕ್ಷನ್ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದರಿಂದ ಕೆಳಕ್ಕೆ ಬಿದ್ದ ಕುಮಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ಯವ ಮಾರ್ಗದಲ್ಲಿ ಕುಮಾರ್ ಮೃತಪಟ್ಟರು’ ಎಂದು ಮೂಲಗಳು ತಿಳಿಸಿವೆ.ಚಾಲಕ ಕಾರನ್ನು ನಿಲುಗಡೆ ಮಾಡದೇ ತೆರಳಿದ್ದಾನೆ. ಘಟನೆ ನಡೆದ ಸುತ್ತಮುತ್ತಲ ಪ್ರದೇಶದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ. ಕಾರಿನ ನೋಂದಣಿ ಸಂಖ್ಯೆ ಪತ್ತೆಯಾಗಿದ್ದು, ಚಾಲಕನನ್ನು ವಶಕ್ಕೆ ಪಡೆದು ಘಟನೆ ಕುರಿತು ವಿಚಾರಣೆ ನಡೆಸಲಾಗುವುದು ಎಂದು ಸಂಚಾರ ಪೊಲೀಸ್ ಮೂಲಗಳು ತಿಳಿಸಿವೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

