Breaking News
Oplus_131072

ವಿಜಯಪುರ : ಕ್ಷುಲ್ಲಕ ಕಾರಣಕ್ಕೆ :ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ!!

ಮೊಬೈಲ್‌ನಲ್ಲಿ ಅತಿಯಾಗಿ ಚಾಟ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಪತಿ ಅಜಿತ್‌ ಪತ್ನಿ ತೇಜುಗೆ ಬುದ್ಧಿವಾದ ಹೇಳಿದ್ದಾರೆ. ಇಷ್ಟಕ್ಕೆ ಸಿಟ್ಟಾದ ತೇಜು, ಪತಿ ಅಜಿತ್ ಗಾಢ ನಿದ್ರೆಯಲ್ಲಿದ್ದಾಗ ಕತ್ತಿಗೆ ಚಾಕುವಿನಿಂದ ಇರಿದಿದ್ದಾಳೆ. ಘಟನೆಯಿಂದ ಅಜಿತ್ ಜೋರಾಗಿ ಕಿರುಚಿಕೊಂಡಿದ್ದು, ಮನೆಯವರು ಆತಂಕಗೊಂಡು ಓಡಿ ಬಂದಿದ್ದಾರೆ. ಈ ವೇಳೆ ಅಜಿತ್‌ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಕೂಡಲೇ ಆತನನ್ನು ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಅಜಿತ್ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.ಸದ್ಯ ತೇಜು ರಾಠೋಡ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *