Breaking News

ಯಾದಗಿರಿ : ಜಮೀನು ವಿಚಾರಕ್ಕಾಗಿ ಹೊಡೆದಾಡಿ‌ ಮೃತಪಟ್ಟ ವ್ಯಕ್ತಿ ಶವವಿಟ್ಟು ಪ್ರತಿಭಟನೆ!

ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆ ಎದುರು ಗೌಡಪ್ಪ ಚವನಭಾವಿ (35) ಎಂಬ ವ್ಯಕ್ತಿಯ ಮೃತದೇಹವಿಟ್ಟು ಕುಟುಂಬಸ್ಥರು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಗೌಡಪ್ಪನ ಮೇಲೆ ನಡೆದ ದಾಳಿಯಿಂದ ಅವರು ಮೃತಪಟ್ಟಿದ್ದು, ನಾರಾಯಣಪುರ ಪಿಎಸ್‌ಐ ರಾಜಶೇಖರ ರಾಥೋಡ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಈ ಪ್ರತಿಭಟನೆ ನಡೆದಿದೆ.ಪಿಎಸ್‌ಐ ರಾಜಶೇಖರ ರಾಥೋಡ್ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ, ಮೃತನ ಶವವನ್ನು ನಾರಾಯಣಪುರ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಇನ್ನೂ ಬಂದಿಲ್ಲ. ಗೌಡಪ್ಪನ ಕುಟುಂಬಸ್ಥರು ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *