Breaking News

ಲಿಂಗಸೂರು : ಮಗಳನ್ನು ಕೊಲೆ ಮಾಡಿ ನದಿಗೆ ಎಸೆದಿದ್ದ ತಂದೆ!!

ಹಂಚಿನಾಳ ಗ್ರಾಮದಲ್ಲಿನ ತೋಟಕ್ಕೆ ಮಗಳನ್ನು ಕರೆದುಕೊಂಡು ಹೋದ ಲಕ್ಕಪ್ಪ ಹನುಮಂತನೊಂದಿಗೆ ಓಡಾಡದಂತೆ ಬುದ್ಧಿ ಹೇಳಿದ್ದ. ಆದರೆ ಮಗಳು ಆತನನ್ನೇ ಮದುವೆಯಾಗುವುದಾಗಿ ಹಟ ಹಿಡಿದಿದ್ದಳು. ಇದರಿಂದ ರೊಚ್ಚಿಗೆದ್ದ ಲಕ್ಕಪ್ಪ ಕೊಲೆ ಮಾಡಿ ಶವವನ್ನು ಶೀಲಹಳ್ಳಿ ಸೇತುವೆ ಹತ್ತಿರದ ಕೃಷ್ಣಾ ನದಿಯಲ್ಲಿ ಎಸೆದಿದ್ದ.ತಾಲ್ಲೂಕಿನ ಹಂಚಿನಾಳ ಗ್ರಾಮದ ರೇಣುಕಾ (17) ಕೊಲೆಯಾದವಳು. ಆಕೆಯ ತಂದೆ ಲಕ್ಕಪ್ಪ ಕಂಬಳಿ ಕೊಲೆ ಮಾಡಿದ್ದಾಗಿ ಪೊಲೀಸರ ಎದುರು ಒಪ್ಪಿಕೊಂಡಿದ್ದಾನೆ.ಲಕ್ಕಪ್ಪ ಎರಡು ಮೂರು ಬಾರಿ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದ. ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಲಕ್ಕಪ್ಪ ಮಗಳನ್ನು ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *