Breaking News

ಕಲಬುರಗಿ :ಎಟಿಎಂ ದರೋಡೆಕೋರರ ಮೇಲೆ ಫೈರಿಂಗ್, ನಾಲ್ವರ ಬಂಧನ!

ಕಲಬುರಗಿಯಲ್ಲಿ ನಡೆದಿದ್ದ ಎಟಿಎಂ ದರೋಡೆ ಪ್ರಕರಣ ಕೇವಲ 15 ದಿನದಲ್ಲಿ ಭೇದಿಸಿರುವ ಇಲ್ಲಿನ ಪೊಲೀಸರು, ಶನಿವಾರ ಬೆಳ್ಳಂ ಬೆಳಗ್ಗೆ ಇಲ್ಲಿನ ಬೇಲೂರು ಕ್ರಾಸ್‌ ಬಳಿ ಹರಿಯಾಣ ಮೂಲದ ಎಟಿಎಂ ದರೋಡೆಕೋರ ಗ್ಯಾಂಗ್‌ ಮೇಲೆ ಗುಂಡಿನ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.ಬಂಧಿತರನ್ನು ಹರಿಯಾಣದ ಶಿರೋಳಿಯ ತಸ್ಲೀಂ (28), ತವಾಣೆಯ ಶರೀಫ್‌ (20), ಶಿಕಾಂಪೂರದ ಶಾಹೀದ್‌ (27) ಹಾಗೂ ಕಾರು ಚಾಲಕ ಹೈದ್ರಾಬಾದ್‌ನ ಅಮೀರ್‌ (25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಮಂಜು, ಫಿರೋಜ್, ರಾಜಕುಮಾರ್ ಅವರಿಗೂ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳನ್ನು ಕಲಬುರಗಿ ಜಿಮ್ಸ್‌ಗೆ ದಾಖಲಿಸಲಾಗಿದೆ. ದರೋಡೆಕೋರರನ್ನು ಬಂಧಿಸಿದ ತಂಡಕ್ಕೆ ಕಮೀಶ್ನರ್‌ ಶರಣಪ್ಪ ಅವರು ₹25 ಸಾವಿರ ನಗದು ಬಹುಮಾನ ಘೋಷಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *