Breaking News

ಬೆಂಗಳೂರು: ನಡು ರಸ್ತೆಯಲ್ಲಿ ಕಾಲೇಜು ಪ್ರಾಧ್ಯಾಪಕನ ಮೇಲೆ ಹಲ್ಲೆ, ಮೂವರ ಬಂಧನ!

ಕುಮಾರಸ್ವಾಮಿ ಲೇಔಟ್​ನ ಜೆಹೆಚ್ ಬಿಸಿ ಲೇಔಟ್​ನಲ್ಲಿ ಖಾಸಗಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು.ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಕೆಎಸ್ ಲೇಔಟ್ ಪೊಲೀರು ಮೂವರು ಆರೋಪಿಗಳಾದ ಭಾನುಪ್ರಸಾದ್, ಶರತ್, ಅಮೃತ್ ಕುಮಾರ್​​ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸದ್ಯ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.ದುಷ್ಕೃತ್ಯ ಮೆರೆದ ಆಟೊ ಚಾಲಕನ ಮೇಲೆ ಪೋಲಿಸರು ಕ್ರಮ ಕೈಗೊಳ್ಳಬೇಕೆಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *