Breaking News

ಮಧ್ಯ ಪ್ರದೇಶ: ಬೈಕ್ ಗೆ ಡಿಕ್ಕಿ ಹೊಡೆದು ಬಾವಿಗೆ ಉರುಳಿದ ವ್ಯಾನ್; 11 ಮಂದಿ ಸಾವು!!

ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಬಾವಿಗೆ ಉರುಳಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಬೈಕ್ ಸವಾರ ಕೂಡ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.ವೇಗವಾಗಿ ಬಂದ ವ್ಯಾನ್ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ನೀರು ತುಂಬಿದ ಬಾವಿಗೆ ಉರುಳಿ ಬಿದ್ದಿದ್ದು, ಬೈಕ್ ಸವಾರ ಸುಮಾರು 11 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ರಕ್ಷಣೆಗಾಗಿ ಬಾವಿಗೆ ಇಳಿದ ಮನೋಹರ್ ಎಂದು ಗುರುತಿಸಲಾದ ಗ್ರಾಮಸ್ಥರು ಸಹ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬಲಿಯಾದ ವ್ಯಕ್ತಿಯ ಶವವನ್ನು ಇನ್ನೂ ಬಾವಿಯಿಂದ ಹೊರತೆಗೆಯಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ.ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *