ಹುಬ್ಬಳ್ಳಿ: ತ್ಯಾಜ್ಯ ಸಂಗ್ರಹಿಸುವ ಆಟೋ ಟಿಪ್ಪರ್ ವಾಹನವೊಂದು ಆರು ವರ್ಷದ ಮಗುವಿಗೆ ಗುದ್ದಿರುವ ಪರಿಣಾಮ, ಆರು ವರ್ಷದ ಮಗು ಮೃತಪಟ್ಟಿರುವ ಘಟನೆ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ.ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಟೋ ಟಿಪ್ಪರ್ ವಾಹನದಿಂದ ಇಂತಹದೊಂದು ಅವಘಡ ಸಂಭವಿಸಿದೆ. ಆಟೋ ಟಿಪ್ಪರ್ ಚಾಲಕ ವೇಗವಾಗಿ ವಾಹನ ಚಲಾಯಿಸಿಕೊಂಡು ಬಂದಿದ್ದು, ರಸ್ತೆಯಲ್ಲಿ ಹೊರಟಿದ್ದ ಬಾಲಕಿಗೆ ಗುದ್ದಿರುವ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕಿಮ್ಸ್ ಗೆ ಮೃತ ದೇಹವನ್ನು ರವಾನೆ ಮಾಡಲಾಗಿದೆ. ಹಮೀದಾಬಾನು ಕಬಾಡೆ(06) ಮೃತ ಬಾಲಕಿಯಾಗಿದ್ದು, ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

