Breaking News

ಶಾಸಕ ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ, ಅಶ್ಲೀಲ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಆರೋಪ!

ಶಾಸಕ ಮುನಿರತ್ನ ಸೇರಿ 7 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ಒಟ್ಟು 3 ಸಾವಿರ ಪುಟಗಳ ಚಾರ್ಜ್​ಶೀಟ್​​ನಲ್ಲಿ ಮುನಿರತ್ನ, ಸುಧಾಕರ್, ಇನ್ಸ್​ಪೆಕ್ಟರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರಣ್ ಕುಮಾರ್, ಮಂಜುನಾಥ್ ಹೆಸರುಗಳನ್ನು ಉಲ್ಲೇಖಿಸಲಾಗಿದೆ.ಆರೋಪಿಗಳು ಪಿಐಗಳು, ಎಸಿಪಿಗಳ ಅಶ್ಲೀಲ ಫೋಟೋ, ವಿಡಿಯೋ ಮಾಡಿರುವುದು ಚಾರ್ಜ್​ಶೀಟ್​ನಿಂದ ಬಯಲಾಗಿದೆ. ತಮ್ಮ ಪರ ಕೆಲಸ ಮಾಡುವಂತೆ ಮಾಡಲು ಬ್ಲ್ಯಾಕ್​ಮೇಲ್ ಮಾಡಿದ ಬಗ್ಗೆಯೂ ಚಾರ್ಜ್​ಶೀಟ್​​ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಾಯಕರ ಅಶ್ಲೀಲ ಫೋಟೋ ತೋರಿಸುವಂತೆ ಹೇಳಿರುವುದನ್ನೂ ಉಲ್ಲೇಖಿಸಲಾಗಿದೆ. ಎಚ್​ಐವಿ ಸೋಂಕಿತ ಸಂತ್ರಸ್ತೆ, ನೊಂದ ಮಹಿಳೆಯಿಂದ ಸಿಐಡಿ ಅಧಿಕಾರಿಗಳು ಹೇಳಿಕೆಗಳನ್ನು ಪಡೆದಿದ್ದರು. ಜತೆಗೆ ಸಾಕ್ಷ್ಯಗಳ ಹೇಳಿಕೆಯನ್ನೂ ಪಡೆಯಲಾಗಿತ್ತು. ಶಾಸಕ ಮುನಿರತ್ನರನ್ನೂ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಬರೋಬ್ಬರಿ 63 ಪ್ರಶ್ನೆಗಳನ್ನು ಕೇಳಿದ್ದಾರೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *