Breaking News

ಬೆಂಗಳೂರು: ಕಿಡ್ನ್ಯಾಪ್‌ ಆಗಿದ್ದ ಕ್ಯಾಬ್‌ ಚಾಲಕನ ಭೀಕರ ಹತ್ಯೆ!!

7-8 ವರ್ಷಗಳಿಂದ ಕ್ಯಾಬ್‌ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ಚಂದ್ರಶೇಖರ್‌ನನ್ನು 3-4 ದಿನಗಳ ಹಿಂದಷ್ಟೇ ಕೆಲ ದುಷ್ಕರ್ಮಿಗಳು ಕಾರಿನಲ್ಲಿ ಅಪ ಹರಣ ಮಾಡಿದ್ದರು. ಈ ಸಂಬಂಧ ಚಂದ್ರಶೇಖರ್‌ ಪೋಷಕರು, ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆತನಿಗಾಗಿ ಎಲ್ಲೆಡೆ ಶೋಧ ಕಾರ್ಯ ನಡೆಸಲಾಗಿತ್ತು ಎಂದು ಪೊಲೀಸರು ಹೇಳಿದರು. ಸಾತನೂರು ಬಳಿಯ ಕಬ್ಟಾಳು ಗ್ರಾಮದ ಬಳಿ ಕಾರಿನಲ್ಲಿ ಅಪರಿಚಿತ ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸರು, ಪರಿಶೀಲಿಸಿದಾಗ ಚಂದ್ರ ಶೇಖರ್‌ ಎಂಬುದು ಗೊತ್ತಾಗಿದೆ. ಅಪಹ ರಿಸಿದ ದುಷ್ಕರ್ಮಿಗಳು, ಚಂದ್ರಶೇಖರ್‌ನನ್ನು ಕಾರಿನಲ್ಲೇ ಮಾರಕಾಸ್ತ್ರಗಳಿಂದ ಇರಿದು ಹತ್ಯೆಗೈದು, ಬಳಿಕ ಕಲ್ಲಿನಿಂದ ತಲೆಯನ್ನು ಜಜ್ಜಿರುವುದು ಕಂಡು ಬಂದಿದೆ. ಈ ಸಂಬಂಧ ಸಾತನೂರು ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಈ ಮಧ್ಯೆ ಹಿರಿಯ ಅಧಿಕಾರಿಗಳು ಎರಡು ಠಾಣೆಯ ಠಾಣಾಧಿಕಾರಿಗಳಿಗೆ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳ ಪತ್ತೆ ಮಾಡುವಂತೆ ಸೂಚಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಹಣಕಾಸಿನ ವಿಚಾರಕ್ಕೆ ಹತ್ಯೆ ನಡೆದಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *