ತಪ್ಪು ಯಾರ ಮಾಡಿದರೂ ತಪ್ಪು ತಪ್ಪೇ..!
ಒಳ್ಳೆಯದೋ ಕೆಟ್ಟದ್ದೋ..! ಕಾಲದ ಬಗ್ಗೆ ಮಾತನಾಡುವವರಿಗೆ ತಕ್ಕಪಾಠ ಕಲಿಸಿದೆ..!
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಿಬ್ಬಂದಿಗಳ ಅಮಾನವೀಯ ಕೃತ್ಯ ಬೆಳಕಿಗೆ ಬಂದಿತ್ತು. BIGTV NEWS ಮಾಡಿದ ವರದಿಗೆ ಎಚ್ಚೇತ್ತುಕೊಂಡ ಪೊಲೀಸ್ ಕಮೀಷನರ್ ಪೊಲೀಸ್ ಕಾನ್ಸಟೇಬಲ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದು, ಬಿಗ್ ಟಿವಿಯ ಬಿಗ್ ಇಂಪ್ಯಾಕ್ಟ್ ಆಗಿದೆ.ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೇರದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ನ ಅಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುವಂತಾಗಿತ್ತು.

ಹುಬ್ಬಳ್ಳಿಯಲ್ಲಿ ತಡರಾತ್ರಿ ಗಸ್ತು ಪೊಲೀಸ್ ಸಿಬ್ಬಂದಿಯಿಂದ ಬಾಲಕನ ಮೇಲೆ ಹಲ್ಲೆ ಮಾಡಿದ್ದು, ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿರುವುದನ್ನು ಬಿಗ್ ಟಿವಿ ವಿಸ್ತೃತ ವರದಿ ಮಾಡಿತ್ತು. ವರದಿಯಿಂದ ಕಸಬಾಪೇಟೆ ಪೊಲೀಸ್ ಠಾಣೆ ಸಿಬ್ಬಂದಿ.. ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್.ಖಲಿಲ್ ಅಹ್ಮದ್ ಎಂಬುವರ ಪುತ್ರ 12 ವರ್ಷದ ಪೈಜಾನ್ ಎನ್ನುವ ಬಾಲಕನ ಮೇಲೆ ಪೊಲೀಸ್ ಕ್ರೌರ್ಯ ಮೆರೆದಿದ್ದು, ಮಧ್ಯರಾತ್ರಿ ಮನೆ ಮುಂದೆ ಬಯಲು ಶೌಚಕ್ಕೆ ಬಂದಾಗ ಹಲ್ಲೆ ಮಾಡಿರುವ ಪೊಲೀಸ್ ವಿರುದ್ಧ ಕುಟುಂಬಸ್ಥರು ಹಿಡಿಶಾಪ ಹಾಕಿದ್ದು,ಮಧ್ಯರಾತ್ರಿ ಕಿಮ್ಸ್ ಗೆ ತೆರಳಿ ಬಾಲಕನಿಗೆ ಚಿಕಿತ್ಸೆ ನೀಡಿ MLC ಮಾಡಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

