Breaking News

ಹಾವೇರಿ:ಆರೋಪ, ಇಂಜೆಕ್ಷನ್ ನೀಡಿದ ಕೆಲ ಹೊತ್ತಲ್ಲೇ ಯುವತಿ ಸಾವು!

ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಯುವತಿಯೋರ್ವಳು ಮೃತಪಟ್ಟ ಘಟನೆ ನಗರದ ಆಸ್ಪತ್ರೆಯೊಂದರಲ್ಲಿ ನಡೆದಿದೆ.ಕೈಯಲ್ಲಿ ಗುಳ್ಳೆ ಆಗಿವೆ ಎಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ವಂದನಾ ಬಂದಿದ್ದರು.ಆಪರೇಷನ್ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಅದರಂತೆಯೇ ಆಸ್ಪತ್ರೆಗೆ ದಾಖಲಾಗಿದ್ದ ವಂದನಾ ಅವರಿಗೆ ಆಪರೇಷನ್​​​​​​ಗೂ ಮೊದಲು ವೈದ್ಯರು ಎರಡು ಇಂಜೆಕ್ಷನ್ ನೀಡಿದ್ದಾರೆ. ಬಳಿಕ ವಂದನಾ ಆರೋಗ್ಯ ಸ್ಥಿತಿ ಏರುಪೇರಾಗಿದೆ.

ಆಗ ವಂದನಾ ಕುಟುಂಬವು ತಕ್ಷಣ ಬೇರೆ ಆಸ್ಪತ್ರೆಗೆ ರವಾನಿಸುವಾಗ ವಂದನಾ ಅಸುನೀಗಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ತಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂದು ಯುವತಿಯ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಅಲ್ಲದೇ ಆಸ್ಪತ್ರೆ ಎದುರು ಮೃತದೇಹವನ್ನಿಟ್ಟು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *