ಕ್ರಿಕೆಟ್ ಪಂದ್ಯದ ವೇಳೆ ನಡೆದ ಬೆಳವಣಿಗೆಗಳ ಮಾಹಿತಿ ಕಲೆಹಾಕಿದೆ. ಅದರ ಪ್ರಕಾರ ಇದು ಗುಂಪು ಹಲ್ಲೆಯಿಂದ ಆಗಿರುವ ಸಾವು ಎಂದು ಖಚಿತ ಪಟ್ಟಿದೆ. ಭಾನುವಾರ ಮಧ್ಯಾಹ್ನ3 ಗಂಟೆಗೆ ಸುಮಾರಿಗೆ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿಯ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಆ ಸಮಯದಲ್ಲಿ ಯುವಕ ಅಲ್ಲಿಗೆ ಹೋಗಿದ್ದ. ಅಲ್ಲಿ ಕ್ರಿಕೆಟ್ ಆಡುತ್ತಿದ್ದವರಿಗೂ ಆತನಿಗೂ ಜಗಳ ನಡೆದಿತ್ತು. ಆರೋಪಿ ಸಚಿನ್ ಆತನಿಗೆ ಹಲ್ಲೆ ನಡೆಸಿದ್ದ. ನಂತಹ ಅಲ್ಲಿದ್ದ 30ಕ್ಕೂ ಹೆಚ್ಚು ಮಂದಿ ಸೇರಿ ಆತನ ಮೇಲೆ ಕೈಯಿಂದ ಹೊಡೆದು, ಕಾಲಿನಿಂದ ಒದ್ದು, ಕಟ್ಟಿಗೆಯಿಂದ ಹೊಡೆದು ಹಲ್ಲೆ ನಡೆಸಿದ್ದರು. ಸ್ಥಳದಲ್ಲಿದ್ದ ಕೆಲವರು ತಡೆಯಲು ಯತ್ನಿಸಿದರೂ ಕೇಳದೇ ಹಲ್ಲೆ ನಡೆಸಿದ್ದರು. ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ’ ಎಂದು ವಿವರಿಸಿದರು.ಯುವಕ ಏಕಾಏಕಿ ಸ್ಥಳಕ್ಕೆ ಹೋಗಿದ್ದ. ಆತ ಯಾವ ತಂಡದ ಪರವಾಗಿಯೂ ಕ್ರಿಕೆಟ್ ಆಡಿರಲಿಲ್ಲ. ಆತ ಮದ್ಯಪಾನ ಮಾಡಿದ್ದಾನೋ ಇಲ್ಲವೋ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗುತ್ತದೆ’ ಎಂದರು.ಯುವಕ ಭಾರತ ವಿರೋಧಿ ಘೋಷಣೆ ಕೂಗಿದ್ದ’ ಎಂಬ ವದಂತಿ ಕುರಿತು ಪ್ರತಿಕ್ರಿಯಿಸಿದ ಕಮಿಷನರ್, ‘ಸದ್ಯಕ್ಕೆ ತನಿಖೆ ಪ್ರಗತಿಯಲ್ಲಿದೆ’ ಎಂದರು.ಬಲವಾದ ಹಲ್ಲೆಯಿಂದ ದೇಹದೊಳಗೆ ಆಗಿರುವ ಗಾಯಗಳಿಂದ ಯುವಕ ಸತ್ತಿರುವುದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ದೃಢಪಟ್ಟಿದೆ. ಆತನಿಗೆ ಹಲ್ಲೆ ನಡೆಸಿದ 15 ಆರೋಪಿಗಳನ್ನು ಬಂಧಿಸಿದ್ದೇವೆ’ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

