Breaking News

ಹುಬ್ಬಳ್ಳಿ :ಬಾಲಕಿ ಕೊಲೆ ಪ್ರಕರಣ, ಪತ್ತೆಯಾಗದ ಆರೋಪಿಯ ವಾರಸ್ದುದಾರರು, ಶವ ಸಂಸ್ಕಾರಕ್ಕೆ ಕೋರ್ಟ್ ಆದೇಶ!

ಅಪ್ರಾಪ್ತ ಬಾಲಕಿ ಕೊಲೆ ಮಾಡಿ ಪೊಲೀಸ್ ಎನ್​ಕೌಂಟರ್​ಗೆ ಬಲಿಯಾದ ಬಿಹಾರ ಮೂಲದ ರಿತೇಶಕುಮಾರ ಅಂತ್ಯ ಸಂಸ್ಕಾರಕ್ಕೆ ಕೋರ್ಟ್ ಆದೇಶಿಸಿದ್ದು, ಕೆಎಂಸಿಆರ್‌ಐ, ಸಿಐಡಿ ಪೊಲೀಸರು ನಿರಾಳ ಆಗಿದ್ದಾರೆ. ಈ ನಡುವೆ ಈತನ ಮೂಲ ಯಾವುದು? ಕುಟುಂಬಸ್ಥರು ಯಾರು? ಎಂಬುದು ಮಾತ್ರ ಇನ್ನೂ ಗೊತ್ತಾಗಿಲ್ಲ.ಈತನ ಶವದ ಅಂತ್ಯಸಂಸ್ಕಾರ ಮಾಡಬಾರದು. ಸಾಕ್ಷ್ಯ ನಾಶವಾಗಬಹುದು ಎಂದು ಕೋರಿ ಬೆಂಗಳೂರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈತನ ಮರಣೋತ್ತರ ಪರೀಕ್ಷೆ ನಡೆಸಿ ಕೋರ್ಟ್ ಆದೇಶಕ್ಕಾಗಿ ಕೆಎಂಸಿಆರ್‌ಐ ವೈದ್ಯರು ಹಾಗೂ ಸಿಐಡಿ ಪೊಲೀಸರು ಕಾಯುವ ಅನಿವಾರ್ಯತೆ ಎದುರಾಗಿತ್ತು.ಈತನ ಕುಟುಂಬಸ್ಥರ ಪತ್ತೆ ಮಾತ್ರ ಆಗಿಲ್ಲ. ಹೀಗಾಗಿ, ಇದೀಗ ಸಿಐಡಿ ಪೊಲೀಸರು ಶವದ ಅಂತ್ಯ ಸಂಸ್ಕಾರವನ್ನು ಎರಡು ದಿನಗಳ ಒಳಗಾಗಿ ನಡೆಸಲಿದ್ದಾರೆ ಎಂದು ವರದಿಯಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *