ಶೌಚಾಲಯಕ್ಕೆ ತೆರಳಿದ್ದಾಗ ವಿದ್ಯುತ್ ಶಾಕ್ ಹೊಡೆದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸೋಮನಹಳ್ಳಿಯಲ್ಲಿ ನಡೆದಿದೆ.ಸೋಮನಹಳ್ಳಿ ಗ್ರಾಮದ ಮಹೇಶ್ ಎಂಬುವವರ ಪುತ್ರ ಕುಶಾಲ್ (9) ಸಾವನ್ನಪ್ಪಿದ ಬಾಲಕ ಎನ್ನಲಾಗಿದೆ.ಹಲವು ಬಾರಿ ವಿದ್ಯುತ್ ತಂತಿ ಸರಿಪಡಿಸುವಂತೆ ಮನವಿ ಮಾಡಿದ್ದರು ಕೂಡ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಬಾಲಕನ ಸಾವಿಗೆ ಬೆಸ್ಕಾಂ ಹಾಗೂ ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯವೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

