Breaking News

ತಿಪಟೂರು: ತೋಟದಲ್ಲಿ ಹಸುಗಳನ್ನು ಮೇಯಿಸಲು ಹೋದ ರೈತ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು!!

ಎಂದಿನಂತೆ ಹಸುಗಳನ್ನು ಮೇಯಿಸಲು ರೈತ ಯೋಗೇಶ್, ತೋಟಕ್ಕೆ ಹೋಗಿದ್ದಾರೆ. ಆದರೆ, ರಾತ್ರಿ ಮಳೆಗಾಳಿಯಿಂದ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ಆಕಸ್ಮಿಕವಾಗಿ ಹಸುಗಳು ಹಾಗೂ ಯೋಗೇಶ್ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿ ತಿಪಟೂರು ಗ್ರಾಮಾಂತರ ಠಾಣೆ ಸಬ್ ಇನ್ಪೆಕ್ಟರ್ ನಾಗರಾಜು, ಬೆಸ್ಕಾಂ ಇಲಾಖೆ ಎಇಇ ಮನೋಹರ್ ಸೇರಿದಂತೆ ಕಂದಾಯ ಇಲಾಖೆ, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.ಮೃತ ವ್ಯಕ್ತಿಯನ್ನು ಚಿಕ್ಕಕೊಟ್ಟಿಗೆಹಳ್ಳಿ ನಿವಾಸಿ ಯೋಗೇಶ್ (55) ಎಂದು ಗುರುತಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *