Breaking News
Oplus_131072

ಶಿರಾಡಿ: ಕಾರಿಗೆ ಲಾರಿ ಢಿಕ್ಕಿ, ವ್ಯಕ್ತಿ ಸಾವು!!

ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದೆ.ಅಬ್ದುಲ್‌ ಶುಕ್ರು ಅವರ ಪತ್ನಿ ಲತಿಕಾ, ಮಗಳು ಅನ್ವೇಷ, ಅಳಿಯ ಶಾಂತನು, ಮೊಮ್ಮಗ ಅನ್ಸು ಅವರು ಸಣ್ಣಪುಟ್ಟ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರು ಅವರು ಮಂಗಳೂರಿನಲ್ಲಿ ವಿಮಾ ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ಮಗಳ ಮಗನನ್ನು ನೋಡಲೆಂದು ಬರುತ್ತಿದ್ದರು. ಉಪ್ಪಿನಂಗಡಿ ಪೊಲೀಸ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತ್ರಿಪುರಾ ಮೂಲದ ಅಬ್ದುಲ್‌ ಶುಕ್ರು ಚೌಧರಿ (72) ಮೃತಪಟ್ಟವರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *