ಪ್ರಜ್ವಲ್ ತನ್ನ ಸಂಬಂಧಿಕರ ಮಗುವಾದ ಅಭಿಷೇಕ್ ಜೊತೆ ಆಟವಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಆ ಮಗುವಿನ ಕಾಲಿಗೆ ಪೆಟ್ಟಾಗಿತ್ತು. ಈ ವೇಳೆ ಮಗುವಿನ ಪೋಷಕರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಇದರಿಂದ ಆತಂಕಗೊಂಡ ಪ್ರಜ್ವಲ್, ಮಗುವಿಗೆ ಏನಾದರೂ ಆಗುವುದೆಂಬ ಭೀತಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ವೇಲ್ ನಿಂದ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಅಕ್ಕಪಕ್ಕದವರು ತಕ್ಷಣವೇ ಪ್ರಜ್ವಲ್‌ನ್ನು ಲೊಕ್ಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಈ ಸಂಬಂಧ ಪ್ರಜ್ವಲ್‌ನ ಸೋದರ ಮಾವ ರಂಗಸ್ವಾಮಿ ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

