Breaking News
Oplus_131072

ಬೆಂಗಳೂರು :ಟಿಪ್ಪರ್‌ ಲಾರಿ ಡಿಕ್ಕಿಯಾಗಿ ಬಿಬಿಎಂಪಿ ಪೌರಕಾರ್ಮಿಕ ಮಹಿಳೆ ಬಲಿ!

ಬಿಬಿಎಂಪಿಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸರೋಜಾ, ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಬಯೋ ಮೆಟ್ರಿಕ್‌ ಹಾಜರಾತಿ ನೀಡಲು ವಾರ್ಡ್‌ ಕಚೇರಿಗೆ ತೆರಳಲು ಬಸವೇಶ್ವರನಗರ ತಿಮ್ಮಯ್ಯ ರಸ್ತೆ ಕಡೆಯಿಂದ ವಾರಿಯರ್‌ ಬೇಕರಿ ಕಡೆಗೆ ರಸ್ತೆ ದಾಟುತ್ತಿದ್ದರು. ಇದೇ ವೇಳೆ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯ ಸರ್ವಿಸ್‌ ರಸ್ತೆಯಲ್ಲಿ ಎಸ್‌ಪಿಎಸ್‌ ಸ್ಕೂಲ್‌ ಕಡೆಯಿಂದ ರಾಜಾಜಿನಗರದ ಕಡೆಗೆ ಹೋಗಲು ದೋಬಿಘಾಟ್‌ ಸಿಗ್ನಲ್‌ನಿಂದ ವೇಗವಾಗಿ ಬಂದ ಟಿಪ್ಪರ್‌ ಲಾರಿ ರಸ್ತೆ ದಾಟುತ್ತಿದ್ದ ಸರೋಜಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಸರೋಜಾ ತಲೆ ಮೇಲೆಯೇ ಆ ಟಿಪ್ಪರ್‌ನ ಮುಂದಿನ ಚಕ್ರ ಹರಿದ ಪರಿಣಾಮ ಆಕೆ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದರು. ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿಸಿ ಕುಟುಂಬಕ್ಕೆ ಮೃತದೇಹ ಹಸ್ತಾಂತರಿಸಿದ್ದಾರೆ. ಘಟನೆ ಬಳಿಕ ಟಿಪ್ಪರ್‌ ಲಾರಿ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಆತನ ಸುಳಿವು ಸಿಕ್ಕಿದ್ದು ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ವಿಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆಸ್ಥಳದಲ್ಲೇ ಮೃತಪಟ್ಟಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *