Breaking News

ಚಿಕ್ಕಬಳ್ಳಾಪುರ: ₹3 ಕೋಟಿ ಮೌಲ್ಯದ ಮೊಬೈಲ್ ಕಳ್ಳತನ, ಏಳು ಜನ ಬಂಧನ!!

ಇ.ಎನ್ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಿಗೆ ವರ್ಗಾವಣೆ ಮಾಡಿದ್ದರು. ತನಿಖೆ ಮುಂದುವರೆಸಿದ ಪೊಲೀಸ್ ಉಪಾಧೀಕ್ಷಕ ರವಿಕುಮಾರ್ ಕೆ.ವೈ, ಪೊಲೀಸ್ ಇನ್ಸ್ ಪೆಕ್ಟರ್ ಸೂರ್ಯ ಪ್ರಕಾಶ್ ಮತ್ತು ಸಿಬ್ಬಂದಿಯು ಎಸ್.ಪಿ. ಕುಶಾಲ್ ಚೌಕ್ಸೆ ರವರ ಮಾರ್ಗದರ್ಶನದಲ್ಲಿ. ಹರಿಯಾಣ, ರಾಜಸ್ತಾನ್​, ಹಿಮಾಚಲ ಪ್ರದೇಶ ಮತ್ತು ಪಶ್ಚಿಮಬಂಗಾಳದಲ್ಲಿ ತನಿಖೆ ನಡೆಸಿ ಉತ್ತರ ಈ ಪ್ರಕರಣದಲ್ಲಿ ಆರೋಪಿಗಳಾದ ಇಮ್ರಾನ್, ಮೊಹಮದ್ ಮುಸ್ತಫಾ, ಅನೂಪ್‌ರಾಯ್, ಅಭಿಜಿತ್ ಪೌಲ್, ಸಕ್ಕಲ್ಲಾ ಮತ್ತು ಯೂಸಫ್‌ಖಾನ್ ಎಂಬ ಭಾರತದ ಕುಖ್ಯಾತ ಏಳು ಜನ ದರೋಡೆಕೊರರ ಗ್ಯಾಂಗ್​ ಅನ್ನು ಬಂಧಿಸಿ ಮಾಡಿ ಕಳುವು ಮಾಡಿದ್ದ ಮೊಬೈಲ್ ಗಳನ್ನು ಸಾಗಾಣಿಕೆ ಮಾಡಲು ಉಪಯೋಗಿಸಿದ್ದ ಟ್ರಕ್ ವಾಹನವನ್ನು ವಶಕ್ಕೆ ಪಡೆದುಕೊಂಡು, ಆರೋಪಿಗಳು ಕಳುವು ಮಾಡಿದ ಮೊಬೈಲ್‌ಗಳನ್ನು ದೆಹಲಿಯಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ ದೇಶದ ಪ್ರತಿ ರಾಜ್ಯಗಳಿಗೆ 300 ರಿಂದ 400 ಮೊಬೈಲ್ ಗಳಂತೆ ಬಿಡಿಬಿಡಿಯಾಗಿ ಮಾರಾಟ ಮಾಡಿದ್ದರು. ಕಳುವು ಮಾಡಲಾದ ಎಲ್ಲಾ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಸೇಪ್ ಸೀಡ್ಸ್ ಕ್ಯಾರಿಯರ್ಸ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಜಿಪಿಎಸ್ ಆಧರಿಸಿ ಚೆಕ್ ಮಾಡಿದಾಗ ಟ್ರಕ್​​ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ರೆಡ್ಡಿಗೊಲ್ಲವಾರಹಳ್ಳಿ ಬಳಿ ಡಾಬಾವೊಂದರ ಬಳಿ ನಿಲ್ಲಿಸಲಾಗಿತ್ತು.ಸ್ಥಳಕ್ಕೆ ಹೋಗಿ ನೋಡಿದಾಗ ಟ್ರಕ್ ಇದೆ, ಆದರೆ, ಚಾಲಕ ಇರಲಿಲ್ಲ. ಟ್ರಕ್​ ಚಾಲಕನ ಕ್ಯಾಬಿನ್ ನಿಂದ ರಂದ್ರ ಕೊರೆಯಲಾಗಿತ್ತು. ಮೊಬೈಲ್​ಗಳನ್ನು ಮತ್ತೊಂದು ಟ್ರಕ್​ಗೆ ತುಂಬಿಕೊಂಡು ಹೋಗಿರುವುದು ಬೆಳಕಿಗೆ ಬಂದಿತ್ತು. 6660 ಮೊಬೈಲ್​ಗಳ ಪೈಕಿ 5140 ಮೊಬೈಲ್​ಗಳನ್ನು ಕಳವು ಮಾಡಲಾಗಿತ್ತು. ಉಳಿದ ಮೊಬೈಲ್​ಗಳು ಟ್ರಕ್​ನಲ್ಲಿ ಉಳಿದುಕೊಂಡಿದ್ದವು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *