Breaking News
Oplus_131072

ದಾವಣಗೆರೆ:ಮೊಬೈಲ್ನಲ್ಲಿ ಮಾತನಾಡುತ್ತಾ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ಸಾವು.!

ದಾವಣಗೆರೆ ಜಿಲ್ಲೆಯ ಹರಿಹರ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಎಂಬಿಎ ಓದುತ್ತಿದ್ದ ಬಳ್ಳಾರಿ ಮೂಲದ ಶ್ರಾವಣಿ ಹರಿಹರಕ್ಕೆ ಸಂಬಂಧಿಕರ ಮನೆಗೆ ಬಂದಿದ್ದರು.ಮೊಬೈಲ್ ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ವಿದ್ಯಾರ್ಥಿನಿ ಶ್ರಾವಣಿ (23) ಮೃತ ದುರ್ದೈವಿ. ಬಳ್ಳಾರಿ ಮೂಲದ ಶ್ರಾವಣಿ ಮೈಸೂರಿನಲ್ಲಿ ಎಂಬಿಎ ಓದುತ್ತಿದ್ದರು. ಶುಭ ಕಾರ್ಯಕ್ಕೆಂದು ಶ್ರಾವಣಿ ಹರಿಹರದಲ್ಲಿನ ತನ್ನ ಸಂಬಂಧಿಕರ ಮನೆಗೆ ಬಂದಿದ್ದರು.ಮಂಗಳವಾರ ರಾತ್ರಿ ಮೊಬೈಲ್​ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿದೆ. ತಲೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ವಿಭಾಗದ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರಿಹರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *