ಜಾರ್ಖಂಡ್ ಮೂಲದ ಪವನ್ ಯಾದವ್ ಮತ್ತು ಗಣೇಶ್‌ಧಾರ್ ಎರಡು ವರ್ಷಗಳಿಂದ ನಗರದಲ್ಲಿ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಸೀಗೇ ಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದರ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದು, ಪಕ್ಕದಲ್ಲಿರುವ ಶೆಡ್‌ನಲ್ಲಿ ವಾಸವಾಗಿದ್ದರು. ಸೋಮವಾರ ಮದ್ಯ ಸೇವಿಸಿದ್ದಾಗ ಇಬ್ಬರ ನಡುವೆ ಕುಟುಂಬಗಳ ವಿಚಾರ ಪ್ರಸ್ತಾಪ ಮಾಡುತ್ತ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ.ಕೋಪಗೊಂಡ ಗಣೇಶ್, ಚಾಕುವಿನಿಂದ ಪವನ್‌ನ ಎದೆ ಮತ್ತು ಪಕ್ಕೆಲುಬಿಗೆ ಚುಚ್ಚಿ ಪರಾರಿ ಯಾ ಗಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪವನ್‌ನನ್ನು ಅಲ್ಲಿದ್ದ ಇತರೆ ಕಾರ್ಮಿಕರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಟ್ಟಡ ನಿರ್ಮಾಣ ಕಾಮಗಾರಿಯ ಗುತ್ತಿಗೆದಾರರೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

