ಬುರ್ರಬಜಾರ್ ಪ್ರದೇಶದ ಫಲ್ಪಟ್ಟಿ ಮಚುವಾ ಹಣ್ಣಿನ ಮಾರುಕಟ್ಟೆಯ ಬಳಿ ಇರುವ ರುತುರಾಜ್ ಹೋಟೆಲ್ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 14 ಮಂದಿ ಸಜೀವ ದಹನವಾಗಿದ್ದಾರೆ. ಅಲ್ಲದೆ, ಹಲವರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕೋಲ್ಕತ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ತಿಳಿಸಿದ್ದಾರೆ.ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ.ಸಂತ್ರಸ್ತರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಅಲ್ಲದೆ, ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಬೇಕೆಂದು ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

