ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ನಿವೃತ್ತ ಕಾರ್ಮಿಕರಾಗಿರುವ ಮಹಿಳೆ ತಾಲ್ಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರುಮಲೆ ರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯ ಅಂಚಿನಲ್ಲಿರುವ ಕೆಎಫ್‌ಡಿಸಿ ರಬ್ಬರ್ ತೋಟದಲ್ಲಿ ಕಾಡಾನೆ ದಾಳಿಯಿಂದ ಗಾಯಗೊಂಡು ಮಂಗಳವಾರ ಬೆಳಿಗ್ಗೆ ಮೃತಪಟ್ಟರು.ಕಾಡಾನೆ ಹಾವಳಿ ತಡೆಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯರು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್‌ಕುಮಾರ್ ರೈ ಅವರಲ್ಲಿ ಮನವಿ ಮಾಡಿದರು.ಸೆಲ್ಲಮ್ಮ ಅವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಅರಣ್ಯ ಇಲಾಖೆ ಮೂಲಕ ₹15 ಲಕ್ಷ ಪರಿಹಾರ ನೀಡಲಾಗುವುದು. ಅಧಿಕಾರಿಗಳಲ್ಲಿ ಚರ್ಚಿಸಿ ನಿಗಮದ ವತಿಯಿಂದ ಸೂಕ್ತ ಪರಿಹಾರ ಹಾಗೂ ಮೃತರ ಪುತ್ರನಿಗೆ ಕೆಎಫ್‌ಡಿಸಿಯಲ್ಲಿ ಕೆಲಸ ಕೊಡಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಭರವಸೆ ನೀಡಿದರು.10 ದಿನಗಳ ಮಟ್ಟಿಗೆ ರಬ್ಬರ್ ತೋಟದೊಳಗೆ ಕಾರ್ಮಿಕರು ಹೋಗುವುದು ಬೇಡ. ಪೆರ್ನಾಜೆಯಲ್ಲಿ ಮಾಡಿದಂತೆ ಈ ಭಾಗದಲ್ಲಿಯೂ ಕಾಡಾನೆ ಹಾವಳಿ ತಡೆಗೆ ಸೌರಬೇಲಿ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು. ಶಾಶ್ವತ ಪರಿಹಾರಕ್ಕೆ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಶಾಸಕರು ಸಲಹೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

