Breaking News

ಆಂದ್ರಪ್ರದೇಶ :ವರಾಹ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದಲ್ಲಿ ಗೋಡೆ ಕುಸಿತ ; 8 ಭಕ್ತರು ಸಾವು!

ಆಂಧ್ರಪ್ರದೇಶದ ಸಿಂಹಾಚಲದ ಶ್ರೀ ವರಾಹ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದಲ್ಲಿ ನಡೆಯುತ್ತಿದ್ದ ವಾರ್ಷಿಕ ಚಂದನೋತ್ಸವಂ ಹಬ್ಬದ ವೇಳೆ ಹೊಸದಾಗಿ ನಿರ್ಮಿತ 20 ಅಡಿ ಉದ್ದದ ಗೋಡೆ ಕುಸಿದು ಎಂಟು ಭಕ್ತರು ಮೃತಪಟ್ಟಿದ್ದಾರೆ. ಸಾವಿರಾರು ಭಕ್ತರು ಪೂಜೆಗೆ ಸರತಿ ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ಬೆಳಗಿನ ಜಾವ 2:30ಕ್ಕೆ ಈ ದುರ್ಘಟನೆ ಸಂಭವಿಸಿದೆ. ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಮತ್ತೊಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್ ಡಿಆರ್ ಎಫ್ ಮತ್ತು ಎನ್ ಡಿ ಆರ್ ಎಫ್ ತ್ವರಿತ ರಕ್ಷಣಾ ಕಾರ್ಯಾಚರಣೆ ನಡೆಸಿವೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *