Breaking News

ತುಮಕೂರು :ಫೈನಾನ್ಸ್ ಸಿಬ್ಬಂದಿಯಿಂದ ಅಪ್ರಾಪ್ತಳ ಮೇಲೆ ಅತ್ಯಾಚಾರಕ್ಕೆ ಯತ್ನ!

ಚಿಕ್ಕನಾಯಕನಹಳ್ಳಿ ಹಂದನಕೆರೆಯಲ್ಲಿ ಈ ಘಟನೆ ನಡೆದಿದೆ. ಈತ ಐಐಎಫ್ ಎಲ್ ಕಂಪನಿಯ ಸಮಸ್ತ ಹೆಸರಿನ‌ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಾಗಿದ್ದು, ಸಾಲ ವಸೂಲಿಗೆ ಹೋದ ವೇಳೆ ಬಾಲಕಿ ಒಬ್ಬಳೇ ಮನೆಯಲ್ಲಿ ಇದ್ದದ್ದನ್ನ ಕಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.ಬಾಲಕಿ ಕಿರುಚಾಡುತ್ತಿದ್ದಂತೆ ಓಡಿ ಹೋಗಿದ್ದಾನೆ ಎನ್ನಲಾಗಿದೆ. ಕೀಚಕ ಬಾಲಕಿಯ ಕುತ್ತಿಗೆ ಬುಜ ಸೇರಿದಂತೆ ವಿವಿಧ ಕಡೆ ಗಾಯಗೊಳಿಸಿದ್ದಾನೆ. ಹಂದನಕರೆ‌ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದ್ದು ಎರಡೇ ದಿನಗಳಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಹಂದನಕೆರೆ ಪೊಲೀಸರು ಹೆಡೆಮುರಿ ಕಟ್ಟಿ ಜೈಲಿಗಟ್ಟಿದ್ದಾರೆ. ಕಿರಣ್ (24) ಎಂಬಾತನಿಂದ ಈ ಪೈಶಾಚಿಕ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *