Breaking News
Oplus_131072

ಮೈಸೂರು: ಜಮೀನು ಸರ್ವೇ ತೆರಳಿದ್ದಾಗ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ!!

ಜಮೀನು ಸರ್ವೆ ಮಾಡಲು ಎಂದು ತೆರಳಿದ ಇಲಾಖೆಯ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಬೆಟ್ಟದಬೀಡು ಗ್ರಾಮದಲ್ಲಿ ಇಲಾಖೆಯ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೆಟ್ಟದ ಬಿಡು ಗ್ರಾಮದಲ್ಲಿ ಈ ಘಟನೆ ನಡೆದಿ. ಸರ್ವೇ ನಂಬರ್ 32ರ ಜಮೀನು ಸರ್ವೆ ನಡೆಸಿ ಜಾಗ ಗುರುತಿಸಲು ತೆರಳಿದ್ದಾಗ ಇಬ್ಬರು ಸಹೋದರರು ಹಲ್ಲೆ ಮಾಡಿದ್ದಾರೆ. ಇಬ್ಬರು ಸಿಬ್ಬಂದಿಗಳ ಮುಖ ಮತ್ತು ಎದೆಯ ಭಾಗಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ. ಇಬ್ಬರಿಗೂ ಎಚ್ ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *