Breaking News

ಮಂಗಳೂರು: ಅನ್ಯಭಾಗ್ಯ ಅಕ್ಕಿ ಪಾಲಿಶ್ ಮಾಡಿ ಬೇರೆ ಬ್ರ್ಯಾಂಡ್​ಗಳ ಹೆಸರಿನಲ್ಲಿ ಮಾರಾಟ ಶಂಕೆ!!

ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್​​ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರು ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ.ಉತ್ತರ ಕರ್ನಾಟಕ ಭಾಗದಿಂದ ಅನ್ನಭಾಗ್ಯದ ಅಕ್ಕಿ ತಂದು ಅಕ್ರಮವಾಗಿ ದಾಸ್ತಾನು ಇರಿಸಿರುವ ಆರೋಪ ಕೇಳಿಬಂದಿದ್ದು, ದಾಳಿ ಮಾಡಿದ ಅಧಿಕಾರಿಗಳು ಗೋಡೌನ್ ಸೀಜ್ ಮಾಡಿದ್ದಾರೆ. ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಅನಿತಾ ಮಾಹಿತಿ ನೀಡಿದ್ದಾರೆ. ಇನ್ನು ಗೋಡೌನ್‌ನಲ್ಲಿ ಲೇಬಲ್ ಇಲ್ಲದ 500 ಕ್ವಿಂಟಾಲ್ ಗೂ ಹೆಚ್ಚು ಅಕ್ಕಿ ದಾಸ್ತಾನು ಇರಿಸಿರುವುದು ಕಂಡು ಬಂದಿದ್ದು ಇದು ಅನುಮಾನಕ್ಕೆ ಕಾರಣವಾಗಿದೆ. ಸದ್ಯ, ಅಕ್ಕಿ ದಾಸ್ತಾನು ಗೋಡೌನ್‌ಗೆ ದಾಳಿ ನಡೆಸಿದ ಅಧಿಕಾರಿಗಳು ಸಂಪೂರ್ಣ ಮಹಜರು ಮಾಡಿ ಬೀಗ ಜಡಿದಿದ್ದಾರೆ. ಈ ಅಕ್ರಮ ಅಕ್ಕಿ ಮಾಫಿಯಾದ ವಿರುದ್ದ ಆಳವಾದ ತನಿಖೆಗೆ ಅಧಿಕಾರಿಗಳು ಇಳಿದಿದ್ದು ಮುಂದೆ ಯಾವ ವಿಚಾರಗಳು ಬಯಲಾಗಲಿವೆ ಎಂಬುದನ್ನು ಕಾದು ನೋಡಬೇಕಾಗಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *