Breaking News

ಪುತ್ತೂರು: ತಾಯಿ ಕೊಲೆ, ಪುತ್ರನಿಗೆ 5 ವರ್ಷ ಜೈಲು ಶಿಕ್ಷೆ!!

ಪುತ್ತೂರು ಕಾಮಣ ಗ್ರಾಮದಲ್ಲಿ 6 ವರ್ಷಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ತಾಯಿಯನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಆರೋಪಿ ಪುತ್ರನಿಗೆ ಪುತ್ತೂರಿನ ಐದನೆಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕಾಮಣ ಗ್ರಾಮದ ಅಂಕಜಾಲು ನವಗ್ರಾಮ ಕಾಲೋನಿಯ ನಿವಾಸಿ ನಾವೂರ ಎಂಬವರ ಪುತ್ರ ಗೋಪಾಲ ಯಾನೆ ಗೋಪ ಶಿಕ್ಷೆಗೊಳಗಾದ ಅಪರಾಧಿ. ನ್ಯಾಯಾಧೀಶೆ ಸರಿತಾ ಡಿ. ಅವರು, ಆರೋಪಿ ಕೃತ್ಯ ಎಸಗಿರುವುದು ಸಾಬೀತಾಗಿರುವುದರಿಂದ 5 ವರ್ಷ ಶಿಕ್ಷೆ ಮತ್ತು ₹5ಸಾವಿರ ದಂಡ ವಿಧಿಸಿದ್ದಾರೆ. ಅಭಿಯೋಜನೆಯ ಪರವಾಗಿ ಜಯಂತಿ ಕೆ.ಭಟ್ ವಾದ ಮಂಡಿಸಿದ್ದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *