Breaking News

ಹಾವೇರಿ : ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!

ಸಾರಿಗೆ ಬಸ್ ಚಾಲಕನೋಬ್ಬ ಬಸ್ ನಲ್ಲಿಸಿ ಮಾರ್ಗ ಮಧ್ಯದಲ್ಲಿ ನಮಾಜ್ ಮಾಡಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಮಂಗಳವಾರ ಸಂಜೆ ಹುಬ್ಬಳ್ಳಿ ಮತ್ತು ಹಾವೇರಿ ಮಾರ್ಗ ಮಧ್ಯದಲ್ಲಿ ಈ ಘಠನೆ ನಡೆದಿದೆ. ಇದನ್ನು ಕಂಡು ಬಸ್ಸಿನಲ್ಲಿದ್ದ ಪ್ರಯಾಣಿಕರು ಒಂದು ಕ್ಷಣ ದಂಗಾಗಿದ್ದಾರೆ. ಪ್ರಯಾಣಿಕರೊಬ್ಬರು ಇದರ ವೀಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಯಾಣಿಕರು ಹಾಗೂ ಸಾರ್ವಜನಿಕರು ಮನವಿ ಮಾಡಿದ್ದಾರೆ.ಘಟನೆ ನಿನ್ನೆ ಸಂಜೆ ಹುಬ್ಬಳ್ಳಿ ಹಾಗೂ ಹಾವೇರಿ ಮಾರ್ಗದ ಮಧ್ಯದಲ್ಲಿ ನಡೆದಿದೆ. ಬಸ್‌ ನಲ್ಲಿ ಹಲವು ಪ್ರಯಾಣಿಕರು ಇದ್ದರೂ ಕೂಡ, ಚಾಲಕನು ಬಸ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ತಾವು ನಮಾಜ್ ಮಾಡುವ ಮೂಲಕ ಧಾರ್ಮಿಕ ಆಚರಣೆ ಮಾಡಿದ್ದಾರೆ. ಈ ವೇಳೆ ಕೆಲ ಪ್ರಯಾಣಿಕರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆದ ನಂತರ, ಈ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *