ನಗರದ ಸ್ಟೇಷನ್ ರಸ್ತೆಯಲ್ಲಿ ಇಂದ್ರನಗರದ ಯುವಕನ ಕೊಲೆ ಮಾಡಲಾಗಿದೆ. ಇಂದ್ರನಗರದ ವೀರೇಶ (27) ಕೊಲೆಯಾಗಿದ್ದಾರೆ. ಮಂಗಳವಾರ ರಾತ್ರಿ ಕೊಲೆ ಮಾಡಲಾಗಿದ್ದು, ಬೆಳಿಗ್ಗೆ ಶವ ಬಿದ್ದರೂ ಜನ ಮದ್ಯ ಸೇವಿಸಿ ಬಿದ್ದಿರಬಹುದು ಎಂದು ಭಾವಿಸಿದ್ದರು. ಸಂಜೆ ದಾರಿ ಹೋಕರು ಅಲುಗಾಡಿಸಿ ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪಶ್ಚಿಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

