Breaking News

ನೆಲಮಂಗಲ: ಗ್ಯಾಸ್ ಲಿಕೇಜ್​ನಿಂದ ಹೊತ್ತಿ ಉರಿದ ಮನೆ, ಇಬ್ಬರು ಸಜೀವದಹನ, ನಾಲ್ವರ ಸ್ಥಿತಿ ಚಿಂತಾಜನಕ!!

ಗಂಗಯ್ಯ ಎಂಬುವವರಿಗೆ ಎರಡು ಬಾಡಿಗೆ ಮನೆಗಳು ಸೇರಿದ್ದು, ಬಳ್ಳಾರಿಯ ನಾಗರಾಜ್​ ಕುಟುಂಬ ಒಂದು ಮನೆಯಲ್ಲಿ ಬಾಡಿಗೆಗೆ ಇತ್ತು. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ನಾಗರಾಜ್ ದೇವರ ಮುಂದೆ ದೀಪ ಹಚ್ಚಿದ್ದರು. ಈ ವೇಳೆ ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಮಗ ಅಭಿಷೇಕ್ ಮುಂದಾಗಿದ್ದ. ಅಜಾಗರೂಕತೆಯಿಂದ ಸಿಲಿಂಡರ್ ಫಿಟ್ ಮಾಡುತ್ತಿದ್ದ ವೇಳೆ ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆಗೆ ನಾಗರಾಜ್ ಹಾಗೂ ಶ್ರೀನಿವಾಸ್ ಮೃತಪಟ್ಟಿದ್ದಾರೆ.ಪಕ್ಕದ ಮನೆಯಲ್ಲಿದ್ದ ಶ್ರೀನಿವಾಸ್ ಹಾಗೂ ಮನೆ ಮಾಲೀಕ ಶಿವಶಂಕರ್ ಬೆಂಕಿ ಹಾರಿಸಲು ಮುಂದಾಗಿದ್ದರು. ಅಭಿಷೇಕ್​ನನ್ನು ಉಳಿಸಲು ಶ್ರೀನಿವಾಸ್ ಹೋಗಿದ್ದು, ಇತ್ತ ನಾಗರಾಜ್​ರನ್ನು ಉಳಿಸಲು ಹೋಗಿದ್ದ ಶಿವಶಂಕರ್​ಗೆ ಬೆಂಕಿ ತಗುಲಿದೆ. ಕೂಡಲೇ ಸ್ಥಳಿಯರು ಬೆಂಕಿ ತಗುಲಿದವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.ನಾಲ್ಕಕ್ಕೂ ಹೆಚ್ಚು ಅಗ್ನಿ ಶಾಮಕ ದಳ ಸಿಬ್ಬಂದಿಗಳಿಂದ ಸತತ 6 ಗಂಟೆಗಳ ಕಾಲ ತೀವ್ರ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಲಾಗಿತ್ತು. ಅಲ್ಲದೆ ಬೆಂಕಿಯ ಕನ್ನಾಲಗೆ ಹೆಚ್ಚಾಗಿ ಕೆಮಿಕಲ್​ ಹೊತ್ತಿ ಉರಿದ ಹಿನ್ನೆಲೆ ಕೆಲಕಾಲ ಸ್ಥಳೀಯರಲ್ಲಿ ಆತಂಕದ ಛಾಯೆ ಎದುರಾಗಿತ್ತು. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *