Breaking News

ಘೋರ ಕೃತ್ಯ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ!!

ರಾಯಚೂರು ನಗರದ ರೈಲ್ವೆ ನಿಲ್ದಾಣದ ಮೈದಾನದಲ್ಲಿ ಘಟನೆ ನಡೆದಿದೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ವೀರೇಶನನ್ನು ಹತ್ಯೆಗೈದು ಸ್ನೇಹಿತರು ಪರಾರಿಯಾಗಿದ್ದಾರೆ. ರಾಯಚೂರಿನಲ್ಲಿ ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ ನಡೆದಿದೆ. ಇಂದಿರಾನಗರದ ವೀರೇಶ್ ಅಲಿಯಾಸ್ ಪಂದಿ ವೀರೇಶ್(27) ಕೊಲೆಯಾದ ಯುವಕ.ರೈಲ್ವೆ ಮೈದಾನದಲ್ಲಿ ಸ್ನೇಹಿತರ ಜೊತೆ ಪಾರ್ಟಿಯಲ್ಲಿ ಭಾಗವಹಿಸಿದ್ದ ವೇಳೆ ಕಿರಿಕ್ ಆಗಿ ಸ್ನೇಹಿತರಿಂದಲೇ ವೀರೇಶನ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್‌ಪಿ ಪು ಟ್ಟಮಾದಯ್ಯ ಹಾಗೂ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಚೂರಿನ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *