Breaking News

ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ!

ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ರಾಮಯ್ಯ ಅವರು ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು ಎಂದು ಕೇಂದ್ರ ಸರ್ಕಾರವನ್ನು  ಆಗ್ರಹಿಸಿದರು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕುಎಂದು ಒತ್ತಾಯಿಸಿದರು. ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು. ರಾಹುಲ್ ಗಾಂಧಿಯವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಲು  ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.ಬಡವರು, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಅನುಕೂಲ ಸಾಮಾಜಿಕವಾಗಿ , ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಆರ್ಥಿಕ ,  ಶೈಕ್ಷಣಿಕ ಮಾಡಿದರೆ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದರು. ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸಚಿವರು ಅಂತಿಮ ಅಭಿಪ್ರಾಯ ಕೊಟ್ಟ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *