ಪ್ರಸಕ್ತ ಸಚಿವ ಸಂಪುಟದಲ್ಲಿ ಮಂಡಿಸಿರುವ
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ಮೇ 9 ರಂದು ನಡೆಯುವ ಸಚಿವ ಸಂಪುಟದಲ್ಲಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು. 50% ಮೀಸಲಾತಿಯನ್ನು ಬದಲಾಯಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ 15 ವಿಧಿ, ಕಲಂ (5) ರಂತೆ ಮೀಸಲಾತಿಯನ್ನು ಕೊಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಇದನ್ನು ಪರಿಗಣಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು. ಬಡವರು, ಜನಸಂಖ್ಯೆ, ಶೈಕ್ಷಣಿಕವಾಗಿ, ಸಾಮಾಜಿಕ ಪರಿಸ್ಥಿತಿಗೆ ಅನುಗುಣವಾಗಿ ಹಿಂದುಳಿದವರಿಗೆ ಮೀಸಲಾತಿ ನಿಗದಿ ಮಾಡಬೇಕೆಂದು ಸಂವಿಧಾನದ ವಿಧಿ ಕಲಂ 14,15,16 ಹೇಳುತ್ತದೆ. ಮುಂದಿನ ಸಚಿವ ಸಂಪುಟದಲ್ಲಿ ಅಭಿಪ್ರಾಯ ಪಡೆದು ಚರ್ಚೆ ಮಾಡಿ, ನಮ್ಮ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಬಜೆಟ್ ರೂಪಿಸುವಾಗ ಇದನ್ನು ಆಧಾರವಾಗಿಟ್ಟುಕೊಂಡು ಮಾಡಲಾಗುವುದು ಎಂದರು. ಮೇ 9 ರಂದು ಬಹುತೇಕ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಲಾಗುವುದು ಎಂದರು. 1992 ರಲ್ಲಿ ಇಂದಿರಾ ಸಾಹಾನಿ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ಮಂಡಲ್ ಸಮಿತಿ ವರದಿಗೆ ದತ್ತಾಂಶ ಏನು ಎಂದು ಸ್ಪಷ್ಟವಾಗಿ ಪ್ರಶ್ನಿಸಿತ್ತು. ಈಗ ಕರ್ನಾಟಕ, ಬಿಹಾರ, ತೆಲಂಗಾಣದಲ್ಲಿ ಸಮೀಕ್ಷೆ ಮಾಡಲಾಗಿದೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

