ಏಪ್ರಿಲ್ 29 ರಂದು ನಾಪತ್ತೆಯಾಗಿದ್ದ ಬಾಲಕಿ ನಂತರ ಶಹದೋಲ್ ಜಿಲ್ಲೆಯ ಪ್ರಮುಖ ಹೋಟೆಲ್‌ನ ಕೋಣೆಯಲ್ಲಿ ಬಂಧಿಯಾಗಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದು, ಅಪಹರಣ ಮತ್ತು ಅಕ್ರಮ ಬಂಧನಕ್ಕೆ ಸಂಬಂಧಿಸಿದಂತೆ ಉಪ ಜೈಲರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎರಡು ದಿನಗಳ ಕಾಲ ನಾಲ್ವರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಉಪ ಜೈಲರ್ ನನ್ನನ್ನು ಅಪಹರಿಸಿದ್ದು, ಹೋಟೆಲ್ ಕೋಣೆಯೊಳಗೆ ಬಲವಂತವಾಗಿ ಕೂಡಿಹಾಕಿದ್ದಾರೆ ಎಂದು ಮಧ್ಯ ಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯೊಬ್ಬಳು ಆರೋಪಿಸಿದ್ದಾಳೆ.ಪೊಲೀಸ್ ಅಧಿಕಾರಿಗಳ ಪ್ರಕಾರ, ಬಾಲಕಿಯ ಆರಂಭಿಕ ಹೇಳಿಕೆಗಳಲ್ಲಿ ಹಲವಾರು ಅಸಂಗತತೆಗಳಿವೆ. ಆಕೆಯ ಔಪಚಾರಿಕ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗುವುದು. ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಆಕೆಯ ವೈದ್ಯಕೀಯ ಪರೀಕ್ಷೆಯನ್ನೂ ಶುಕ್ರವಾರ ನಡೆಸಲು ನಿರ್ಧರಿಸಲಾಗಿತ್ತು ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

