Breaking News

ಬೆಳಗಾವಿ: ಕೃಷಿಹೊಂಡದಲ್ಲಿ ಮುಳುಗಿ ಮೂರು ಮಕ್ಕಳ ಸಾವು!

ಶಾಲೆಗೆ ರಜೆ ಇದ್ದ ಕಾರಣಕ್ಕೆ ಈಜಲು ಹೋದ ಮೂವರು ಬಾಲಕರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟ‌ನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಜಮೀನಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಇಂಗಳಿ ಗ್ರಾಮದ ಪೃಥ್ವಿರಾಜ್‌ ಕೆರಬ, ಅಥರ್ವ ಸೌಂದಲಗೆ, ಸಮರ್ಥ ಗಡಕರಿ ಮೃತ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳಿಗೂ ಈಜು ಬರುತ್ತಿರಲಿಲ್ಲ. ಮೂವರು ಸೇರಿ ಈಜು ಕಲಿಯಲು ಮನೆಯಿಂದ ಸೈಕಲ್ ತೆಗೆದುಕೊಂಡು ಊರ ಹೊರಗಿರುವ ಕೃಷಿ ಹೊಂಡಕ್ಕೆ ಈಜು ಕಲಿಯಲು ಕೃಷಿ ಹೊಂಡಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದೆ.ಹೊಂಡ ಇಣುಕಿದಾಗ ಮೂವರು ಬಾಲಕರ ಶವ ಪತ್ತೆಯಾಗಿದೆ. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ರೋಧನೆ ಮುಗಿಲುಮುಟ್ಟಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *